ಹುಣಸೂರು ತಾಲ್ಲೂಕಿನಲ್ಲಿ ಹುಲಿ ಬೇಟೆ ಪ್ರಕರಣ : ಅರಣ್ಯ ಸಿಬ್ಬದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮೈಸೂರು,ಸೆಪ್ಟಂಬರ್,7,2020(..):ನಾಗರಹೊಳೆ ಅರಣ್ಯದಲ್ಲಿ ಹುಲಿ ಬೇಟೆಯಾಡಿದ್ದ ಆರೋಪಿಗಳನ್ನ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆಯ ಕಲ್ಲಹಳ್ಳದಲ್ಲಿ ಆರೋಪಿಗಳು ಹುಲಿಗೆ ಗುಂಡಿಕ್ಕಿ‌ ಕೊಂದಿದ್ದರು. ಬಳಿಕ ಹುಲಿಯ ‌ಕಾಲನ್ನು ಕತ್ತರಿಸಿಕೊಂಡು ಹೋಗಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಈ ಪ್ರಕರಣವನ್ನ ನಾಲ್ಕೇ ದಿನದಲ್ಲಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ್ದರು. ಅರಣ್ಯ ಸಿಬ್ಬಂದಿಗಳ ಈ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. : - –- - – -