ಡ್ರಗ್ಸ್ ದಂಧೆ ವಿಚಾರ: ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕಲ್ಲ- ಸಚಿವ ಭೈರತಿ ಬಸವರಾಜು… ಬಾಗಲಕೋಟೆ,ಸೆಪ್ಟಂಬರ್,7,2020(..): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ದಂಧೆ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳಿಂದ ಒತ್ತಡ ಆರೋಪಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ಭೈರತಿ ಬಸವರಾಜು, ಯಾರೇ ತಪ್ಪು ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೋಳ್ಳಲಾಗುತ್ತದೆ. ಕ್ರಮ ಜರುಗಿಸಲು ಸರ್ಕಾರ ಹಿಂದೇಟು ಹಾಕುವುದಿಲ್ಲ. ಯಾರನ್ನೂ ಸಹ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು. ಹಾಗೆಯೇ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಭೈರತಿ ಬಸವರಾಜು, ಸಂಪುಟ ವಿಸ್ತರಣೆ ವಿಚಾರ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು. ಸಿಎಂ ಬಿಎಸ್ ವೈ ನಿರ್ಧಾರಕ್ಕೆ ನಾವು ಬದ್ಧ ಎಂದರು. : - - – – -