‘ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್’ ಪುಸ್ತಕ ಬಿಡುಗಡೆ… ಮೈಸೂರು,ಸೆಪ್ಟಂಬರ್,6,2020(..): ಹಿರಿಯ ಛಾಯಾಗ್ರಹಕ ವಿಶ್ವನಾಥ್ ಸುವರ್ಣ ಅವರು ಸಿದ್ದಪಡಿಸಿರುವ “ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್” ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಆನ್ ಲೈನ್ ಮೂಲಕ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್ ಪುಸ್ತಕ ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್, ಕರ್ನಾಟಕ ಕಾವಲು ಪಡೆಯ ಎಂ.ಮೋಹನ್ ಕುಮಾರ್ ಗೌಡ ಸೇರಿ ಮತ್ತಿತರರು ಉಪಸ್ಥಿತರಿದ್ದರು. : - – –- –-- -