‘ರೈತ ವಾಸ್ತವ್ಯ’ಕ್ಕೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್.. ಬೆಂಗಳೂರು,ಸೆಪ್ಟಂಬರ್.6,2020(..): ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ತತಕ್ಷಣವೇ ಸೂಕ್ತಕ್ರಮಗಳನ್ನು ಕೈಗೊಂಡು ಈ ಬಾರಿ ಬಿತ್ತನೆ ಹೆಚ್ಚಾಗುವಂತೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇದೀಗ ಮತ್ತೊಂದು ಮಹತ್ತರ ಹೆಜ್ಜೆಯಿಟ್ಟಿದ್ದಾರೆ. ರೈತಾಪಿ ಕುಟುಂಬದಿಂದ ಬಂದಿರುವ ಸ್ವತಃ ಕೃಷಿಕರು ಆಗಿರುವ ಬಿ.ಸಿ.ಪಾಟೀಲ್ ಅನ್ನದಾತನ ಕಷ್ಟನಷ್ಟಗಳನ್ನು ಬಹಳ ಹತ್ತಿರದಿಂದ ಬಲ್ಲವರೂ ಕೂಡ. ಸದಾ ರೈತರ ಬಗ್ಗೆ ಕಾಳಜಿ ಇತ್ತೀಚೆಗೆ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ನವೀನ‌ ಬದಲಾವಣೆ ಪ್ರಗತಿಗೆ ಹಲವಾರು ಯೋಜನೆಗಳನ್ನು ಕೈಗೊಳ್ಳುತ್ತಿರುವ ಕೃಷಿಸಚಿವ ಬಿಸಿ ಪಾಟೀಲ್ ಇದೀಗ ರೈತರೊಂದಿಗೆ ಕಾಲಕಳೆಯಲು ನಿರ್ಧರಿಸಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ “ರೈತ ವಾಸ್ತವ್ಯ” ಕ್ಕೆ ಮುಂದಾಗಿದ್ದಾರೆ. ಕೋವಿಡ್ ಮುಗಿದ ಬಳಿಕ ರೈತ ವಾಸ್ತವ್ಯಕ್ಕೆ ಹೆಜ್ಜೆಯಿಟ್ಟಿರುವ ಬಿ.ಸಿ.ಪಾಟೀಲರು ಕೃಷಿ ಅಧಿಕಾರಿಗಳ ಜೊತೆ ಪ್ರಗತಿಪರ ರೈತರನ್ನು ಭೇಟಿಮಾಡಿ ರೈತರ ನಿವಾಸದಲ್ಲಿ ವಾಸ್ತವ್ಯ ಹೂಡುವುದು, ರೈತ,ರ ಜೊತೆಗೆ ಚರ್ಚೆ, ಪ್ರಗತಿಪರ ರೈತರ ಸಾಧನೆಗಳನ್ನು ಇತರ ರೈತರಿಗೂ ಪ್ರೇರಣೆಯಾಗಿಸುವುದು ಸೇರಿದಂತರ ರೈತರ ಸಮಸ್ಯೆಗಳನ್ನು ಆಲಿಸಲು ಮುಂದಾಗಲಿದ್ದಾರೆ. ಕೊರೊನಾ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯಕ್ಕೆ ರೂಪುರೇಷೆ ಸ್ಥಳ ಮತ್ತು ದಿನಾಂಕದ ಆಯ್ಕೆ ನಡೆಯಲಿದೆ. : - – –- .