ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ… ಬೆಂಗಳೂರು,ಸೆಪ್ಟಂಬರ್,6,2020(..):ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್ 7 ರಿಂದ 19 ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ಕೆಎಸ್ ಆರ್ ಟಿಸಿ ವತಿಯಿಂದ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾಕೇಂದ್ರಕ್ಕೆ ತೆರಳಲು ಹಾಗೂ ಹಿಂದಿರುಗುವಾಗ ಸರ್ಕಾರಿ ಬಸ್ ಗಳಲ್ಲಿ ಪ್ರವೇಶ ಪತ್ರ ತೊರಿಸಿ ವಿದ್ಯಾರ್ಥಿಗಳು ಪ್ರಯಾಣಿಸಬಹುದಾಗಿದೆ. ನಗರ ಪ್ರದೇಶ, ಹೊರವಲಯ, ವೇಗಧೂತ ಬಸ್ ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಈ ಉಚಿತ ಬಸ್ ಸೇವೆ ನೀಡಲಾಗಿದೆ. : -- -–