ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ. ರಾಮನಗರ,ಏಪ್ರಿಲ್,4,2024 (..):ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಡಾ.‌ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಅಭ್ಯರ್ಥಿ ಅ ಡಾ.‌ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರ‌ದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಡಾ.ಸಿ.ಎನ್ ಮಂಜುನಾಥ್ ಅವರು, ನಂತರ ಮೆರವಣಿಗೆ ಮೂಲಕ ಪಿಡಬ್ಲ್ಯುಡಿ ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು. ಬಳಿಕ ರಾಮನಗರ ಆಂಜನೇಯ ದ್ವಾರದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. : , . ,