ಡ್ರಗ್ಸ್ ಹಣದಿಂದ ಸಮ್ಮಿಶ್ರ ಸರ್ಕಾರ ಬೀಳಿಸಿದ ಆರೋಪ: ಮಾಜಿ ಸಿಎಂ ಹೆಚ್.ಡಿಕೆಗೆ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು… ಮೈಸೂರು,ಸೆಪ್ಟಂಬರ್,5,2020(..): ಡ್ರಗ್ಸ್ ಹಣದಿಂದಲೇ ಸಮ್ಮಿಶ್ರ ಸರ್ಕಾರವನ್ನ ಬೀಳಿಸಲಾಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಡ್ರಗ್ಸ್ ಹಣದಿಂದ ಸರ್ಕಾರ ಬೀಳಿಸುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ. ಹೆಚ್.ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡ್ರಗ್ಸ್ ದಂಧೆ ತಡೆಗಟ್ಟಬಹುದಿತ್ತು. ಆಗ ಸುಮ್ಮನಿದ್ದು ಈಗ ಮಾತನಾಡಿದರೇ ಹೇಗೆ..? ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಡ್ರಗ್ಸ್ ಧಂಧೆಯಿಂದ ಬಂದ ಹಣದಿಂದಲೇ ಹಿಂದಿನ‌ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನ ಮಾಡಿದ್ದರು ಎಂದು ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದರು. : – - – - –