ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ ‘ಡಾ.ರಾಜ್ ಕುಮಾರ್’ ಹೆಸರಿಡಲು ನಿರ್ಧಾರ…. ಬೆಂಗಳೂರು,ಸೆಪ್ಟಂಬರ್,3,2020(..):ಬೆಂಗಳೂರು ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಹೆಸರಿಡಲು ತೀರ್ಮಾನ ಮಾಡಲಾಗಿದೆ. ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ ”ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೀಗಾಗಿ ಇಂದು “ನಮ್ಮ‌ಮೆಟ್ರೋ” ದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್‌ ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಸಲ್ಲಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್.ರಮೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. : . - – – - -