ಆಸ್ಪತ್ರೆ ಕಟ್ಟಡದಿಂದ ಹಾರಿ ಕೊರೋನಾ ಸೋಂಕಿತ ಆತ್ಮಹತ್ಯೆ…. ಗದಗ,ಸೆಪ್ಟಂಬರ್,4,2020(..):ಆಸ್ಪತ್ರೆ ಕಟ್ಟಡದಿಂದ ಹಾರಿ ಕೊರೋನಾ ಸೋಂಕಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಹೊರ ವಲಯದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ವ್ಯಕ್ತಿ ಆತ್ಮಹತ್ಯೆಗೆ ಶರಣಾದವರು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ವ್ಯಕ್ತಿಯನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವ್ಯಕ್ತಿ ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸೋಂಕಿತ ವ್ಯಕ್ತಿ ಒಮ್ಮೆ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. : -- -- – -