ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಲಿ: ಮೈಸೂರಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ…. ಮೈಸೂರು,ಸೆಪ್ಟಂಬರ್,3,2020(..): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ನಡುವೆ ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಎಬಿಬಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಕೊರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಈ ಜಾಲದಲ್ಲಿ ಸ್ಯಾಂಡಲ್ ವುಡ್ ಗೆ ನಂಟಿರುವ ಆರೋಪ ಕೇಳಿ ಬಂದಿದೆ. ಹಾಗೂ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿ ರಾಜಕಾರಣಿಗಳು ಇದ್ದಾರೆ. ಈ ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ಹಾಗೆಯೇ ಸಮಾಜಕ್ಕೆ ಹಾನಿಕಾರಕ ಈ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತುಹಾಕಬೇಕು. ಯಾರೇ ತಪ್ಪಿತಸ್ಥರಿದ್ದರೂ ಅ ಅವರಿಗೆ ತಕ್ಕ ಶಿಕ್ಷೆ ನೀಡಬೇಕು. ಕೂಡಲೇ ಗೃಹ ಇಲಾಖೆ ಡ್ರಗ್ಸ್ ಜಾಲದ ವಿರುದ್ದ ತನ್ನ ತನಿಖೆ ಚುರುಕುಗೊಳಿಸಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. : - –- - - – –