ಪ್ರಣವ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ ಬೆಂಗಳೂರು, ಸೆಪ್ಟೆಂಬರ್ 01, 2020 (..):ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಣವ್ ನಿವಾಸಕ್ಕೆ ಭೇಟಿ ನೀಡಿ ಮಾಜಿ ರಾಷ್ಟ್ರಪತಿಗೆ ಅಂತಿಮ ನಮನ ಸಲ್ಲಿಸಿದರು. ಕೋವಿಡ್-19 ಮಾರ್ಗಸೂಚಿಯಂತೆ ಮೃತದೇಹವನ್ನು ಅಂತಿಮ ವಿಧಿಗಾಗಿ, ತೆರೆದ ವಾಹನದ ಬದಲು ಶವ ಸಾಗಿಸುವ ವಾಹನದಲ್ಲೇ ತೆಗೆದುಕೊಂಡು ಹೋಗಲಾಗುತ್ತದೆ. ಪ್ರಣವ್ ನಿಧನದ ಕಾರಣ ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ. ಸೇನೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.