ಸಂಸದೆ ಸುಮಲತಾ ಅಂಬರೀಶ್ ನಿರ್ಧಾರ ಸ್ವಾಗತಿಸಿದ ಹೆಚ್.ಡಿಕೆ. ಮಂಡ್ಯ,ಏಪ್ರಿಲ್, 3, 2024 (..):ಈ ಬಾರಿ ಲೋಕಸಭಾ ಚುನಾವಣೆ ಸ್ಪರ್ಧೆಯಿಂದ ಸಂಸದೆ ಸುಮಲತಾ ಅಂಬರೀಶ್ ಹಿಂದೆ ಸರಿದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ್ದು ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರ ನಿರ್ಧಾರವನ್ನ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿಕೆ, ಸುಮಲತಾ ಅಂಬರೀಶ್ ಅವರ ನಿರ್ಧಾರವನ್ನ ಸ್ವಾಗತಿಸುತ್ತೇನೆ. ಬಿಜೆಪಿಗೆ ಬೆಂಬಲ ನೀಡಿದರೇ ನನಗೂ ಬೆಂಬಲ ನೀಡಿದಂತೆ. ಸುಮಲತಾ ಅವರನ್ನ ಪ್ರಚಾರಕ್ಕೂ ಕರೆಯುವೆ. ನಾಳೆ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದರು. : , ,