ಪಿರಿಯಾಪಟ್ಟಣ ತಾಲೂಕಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವು ಮೈಸೂರು, ಸೆಪ್ಟೆಂಬರ್‌ 01, 2020 (..): ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವನ್ನಪ್ಪಿರುವ ಘಟನೆ ಬೆಳ್ತೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮ ಮಹದೇವ (35) ಮೃತ ದುರ್ದೈವಿ. ಘಟನಾ ಸ್ಥಳದಲ್ಲಿ ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ.