ಸದಾಶಿವ ಆಯೋಗ ವರದಿ ಯಥಾವತ್ ಜಾರಿಗೆ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹ… ಬೆಂಗಳೂರು,ಆಗಸ್ಟ್,31,2020(..):ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗ ವರದಿಯನ್ನು ಯಥಾವತ್ ಜಾರಿಗೊಳಿಸಿ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ಆಗ್ರಹಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ‘ಒಳ ಮೀಸಲಾತಿಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಯಾರಿಗೂ ಅನ್ಯಾಯವಾಗುವುದಿಲ್ಲ. ಸದಾಶಿವ ಅವರು ವೈಜ್ಙಾನಿಕವಾಗಿಯೇ ವರದಿ ನೀಡಿದ್ದಾರೆ. ವರದಿ ಜಾರಿಯಾದರೂ ನಾವೆಲ್ಲ ಒಟ್ಟಾಗಿಯೇ ಇರುತ್ತೇವೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ ಎಂದು ಸಲಹೆ ನೀಡಿದರು. ಹಾಗೆಯೇ ‘ಪ್ರಸ್ತುತ ಸರಿಯಾದ ಪ್ರಮಾಣದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಈ ವರದಿ ಜಾರಿಯಾದರೆ ಮೀಸಲಾತಿಗೆ ನ್ಯಾಯ ಸಿಗಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಮುಂದಾಗಿದ್ದರು. ಆದರೆ, ಚುನಾವಣೆ ಎದುರಾದ ಕಾರಣ ಅಲ್ಲಿಗೇ ಕೈಬಿಟ್ಟಿದ್ದರು ಎಂದು ಕೆ.ಹೆಚ್ ಮುನಿಯಪ್ಪ ತಿಳಿಸಿದರು. : - – - –