ಮೈಸೂರಿನಲ್ಲಿ ಟಿಪ್ಪರ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ.. ಮೈಸೂರು,ಆಗಸ್ಟ್,31,2020(..): ಟಿಪ್ಪರ್ ಲಾರಿ ಮತ್ತು ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಾಹನ ಜಖಂ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ವಾಹನದಲ್ಲಿದ್ದ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ವೇಳೆ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –