ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಮೈಸೂರು, ಆಗಸ್ಟ್, 31, 2020(..); ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನೂತನ ಕಟ್ಟಡದ ಶಿಲಾನ್ಯಾಸಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು. ಮೈಸೂರು ವಿವಿ ಮಾನಸಗಂಗೋತ್ರಿಯ ಆವರಣದಲ್ಲಿ ಸೋಮವಾರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನಡೆಸಲಾಯಿತು. ಈ ಮೊದಲು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ಮಾನವಿಕ ಸಭಾಂಗಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತಿತ್ತು. ವಿಭಾದಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಬ್ ಅಥವಾ ಇತರೆ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಜಾಗದ ಕೊರತೆಯಿತ್ತು. ಹೀಗಾಗಿ, ಪ್ರತ್ಯೇಕವಾಗಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಇಂದು ಚಾಲನೆ ನಿಡಲಾಗಿದೆ. ವಿವಿ ಕುಲಸಚಿವ ಆರ್.ಶಿವಪ್ಪ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಕೆ.ಪುಟ್ಟಸ್ವಾಮಿ,ಪ್ರೊ.ನಿರಂಜನವಾನಳ್ಳಿ, ಐಸಿಎಸ್ ಎಸ್ ಆರ್ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಉಷರಾಣಿ, ಪ್ರೊ.ಎಂ.ಎಸ್.ಸಪ್ನ, ಪ್ರೊ.ಮಮತಾ ಇತರರು ಇದ್ದರು. : ---