ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ… ಬೆಳಗಾವಿ,ಆ,27,2020(..): ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ಪೀರನವಾಡಿ ನಾಕಾದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಗುರುತಿಸಿದ ಜಾಗದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪಿಸಿ ಎಂದು ಆಗ್ರಹಿಸಿದರು. ಸ್ಥಳೀಯ ಶಾಸಕ ಅಭಯ್ ಪಾಟೀಲ್ ವಿರುದ್ದವೂ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ವೋಟ್ ಬ್ಯಾಂಕ್ ಕಾರಣದಿಂದ ವಿವಾದದ ಬಗ್ಗೆ ಶಾಸಕರು ಮಾತನಾಡುತ್ತಿಲ್ಲ. ವಿವಾದವನ್ನ ಬಗೆಹರಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ. : - – – --