ಮೈಸೂರಿನಲ್ಲಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ… ಮೈಸೂರು,ಆಗಸ್ಟ್,26,2020(..): ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಮೈಸೂರಿನಲ್ಲಿ ಅಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಅಭಿವೃದ್ದಿ ಅಧಿಕಾರಿ, ಉಪ ಅಯುಕ್ತ ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುವೆಂಪುನಗರ ನಿವಾಸ, ಪಾಲಿಕೆ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು ಎಸಿಬಿ ಎಸ್ಪಿ ಮಾರ್ಗದರ್ಶನದಲ್ಲಿ ರಾಮನಗರ ಡಿವೈಎಸ್‌ಪಿ ನೇತೃತ್ವದಲ್ಲಿ ಬೆಂಗಳೂರು ತಂಡದಿಂದ ದಾಳಿ ನಡೆಸಲಾಗಿದ್ದು ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ. : - –- –