ಸಚಿವ ಸ್ಥಾನದ ಬಗ್ಗೆ ಬಹಳ ಆಸೆ ಇಟ್ಟುಕೊಂಡಿಲ್ಲ -ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್… ಚನ್ನಪಟ್ಟಣ,ಆ,24,2020(..): ನನ್ನನ್ನ ಎಂಎಲ್ ಸಿ ಮಾಡಿದ್ದಕ್ಕೆ ತೃಪ್ತಿ ಇದೆ. ನಾನು ಸಚಿವ ಸ್ಥಾನದ ಬಗ್ಗೆ ಬಹಳ ಆಸೆ ಇಟ್ಟುಕೊಂಡಿಲ್ಲ ಎಂದು ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ನುಡಿದರು. ಚೆನ್ನಪಟ್ಟಣದಲ್ಲಿ ಇಂದು ಮಾತನಾಡಿದ ಸಿ.ಪಿ ಯೋಗೇಶ್ವರ್, ನನಗೆ ಸಚಿವ ಸ್ಥಾನ ನೀಡುವ ವಿಚಾರ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು . ಸಚಿವ ಸ್ಥಾನ ನೀಡುವುದು ಬಿಡುವುದರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಸಚಿವ ಸ್ಥಾನದ ಬಗ್ಗೆ ಬಹಳ ಆಸೆ ಇಟ್ಟುಕೊಂಡಿಲ್ಲ ಎಂದರು. ಹಾಗೆಯೇ ನನ್ನನ್ನ ಎಂಎಲ್ ಸಿ ಮಾಡಿದ್ದಕ್ಕೆ ಧನ್ಯವಾದ ಅರ್ಪಿಸಲು ದೆಹಲಿಗೆ ಹೋಗಿದ್ದೆ. ಇನ್ನು ಮೂರು ವರ್ಷ ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ಸಿ.ಪಿ ಯೋಗೇಶ್ವರ್ ತಿಳಿಸಿದರು. : - –- .