ನಂಜನಗೂಡು ಪ್ರಬಾರ ಟಿಎಚ್ಒ ಆಗಿ ಈಶ್ವರ್ ನೇಮಕ ಮೈಸೂರು, ಆಗಸ್ಟ್, 24, 2020(..); ನಂಜನಗೂಡು ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಆ ಜಾಗಕ್ಕೆ ಪ್ರಬಾರ ಟಿಎಚ್ಒ ಆಗಿ ಈಶ್ವರ್ ಅವರನ್ನು ನೇಮಿಸಲಾಗಿದೆ. ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಜಾಗಕ್ಕೆ ಮೂಗೂರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಅವರು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದರು. ಈ ನಡುವೆ ಇವರ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಮೈಸೂರು ಜಿ.ಪಂ ಸಿಇಒ ಅವರನ್ನ ವರ್ಗಾವಣೆ ಮಾಡುವಂತೆ ವೈದ್ಯರು ಮುಷ್ಕರ ನಡೆಸಿದ್ದರು. ; ---