ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ಸಾಧ್ಯತೆ..? ಜಿಲ್ಲಾಡಳಿತದಿಂದ ಮೀಸಲಾತಿ ಪಟ್ಟಿ ಪ್ರಕಟ ಮೈಸೂರು,ಆಗಸ್ಟ್,25,2020(..); ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಮೀಸಲಾತಿ ಪಟ್ಟಿಯನ್ನು ಮೈಸೂರು ಜಿಲ್ಲಾಡಳಿತ ಪ್ರಕಟ ಮಾಡಿದೆ. ಅಕ್ಟೋಬರ್ ನಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಜಿಲ್ಲಾಡಳಿತವು ಚುನಾವಣೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಗ್ರಾಪಂ ಮಟ್ಟದಲ್ಲಿ ಅಭಿವೃದ್ದಿ ಕಾರ್ಯ ಚುರುಕುಗೊಂಡಿದ್ದು, ಆಕಾಂಕ್ಷಿಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಿರುವುದು ತಿಳಿದು ಬಂದಿದೆ. ; --------