ಇನ್ನಾದರೂ ಸಣ್ಣತನದ ರಾಜಕೀಯ ಬಿಡಿ: ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪತ್ರ ಬರೆದು ಹಲವು ಪ್ರಶ್ನೆಗಳ ಸುರುಮಳೆಗೈದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಆ,21,2020(..): ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ರಾಜಕೀಯ ಕೆಸರೆರಚಾಟ ನಡೆಸುತ್ತಿದ್ದು, ಇನ್ನಾದರೂ ಎರಡು ಪಕ್ಷಗಳು ಸಣ್ಣತನದ ರಾಜಕೀಯ ಬಿಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ. ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹಾಗೂ ವಿಪಕ್ಷ ಕಾಂಗ್ರೆಸ್‌ಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಬಹಿರಂಗ ಪತ್ರ ಬರೆದು ಹಲವು ಪ್ರಶ್ನೆಗಳನ್ನ ಹಾಕಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಹೆಚ್.ಡಿಕೆ, ಡಿ.ಜೆ ಹಳ್ಳಿ ಗಲಭೆಯು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ ನಡವಳಿಕೆಯನ್ನು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ ಪ್ರದರ್ಶಿಸಬೇಕಾಗಿತ್ತು. ಆದರೆ, ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ಪ್ರತಿ ಘಟನೆಯಲ್ಲೂ ರಾಜಕೀಯ ಧ್ರುವೀಕರಣಕ್ಕೆ ಬೇಕಾಗುವ ಅಂಶ ಹುಡುಕುವ ಈ ಎರಡೂ ಪಕ್ಷಗಳು ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ಗೆ ಪ್ರಶ್ನೆ: ಅಲ್ಪ ಸಂಖ್ಯಾತರನ್ನು ರಕ್ಷಿಸಬೇಕಾದ್ದು ಯಾವಾಗ…? 3.ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್‌ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‌ಗೆ ಏನು ಲಾಭವಿದೆ? ಇದರ ವಿವರಣೆ ನೀಡಬಹುದೇ? ಬಿಜೆಪಿಗೆ ಪ್ರಶ್ನೆ: ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣ ಮಾಡುವಿರೇ..? 3.ಗಲಭೆ ಸೃಷ್ಟಿಸಲೆಂದೇ ಅನ್ಯ ರಾಜ್ಯಗಳಿಂದ ಗೂಂಡಾಗಳನ್ನು ಕರೆತರಲಾಗಿತ್ತು ಎಂದು ಬಿಜೆಪಿ ಆರಂಭದಲ್ಲಿ ಉಯಿಲೆಬ್ಬಿಸಿತು. ಹಾಗಾದರೆ, ಘಟನೆಗೆ ಸಂಬಂಧಿಸಿದಂತೆ ಈ ವರೆಗೆ ಬಂಧನಕ್ಕೊಳಗಾಗಿರುವ ಅನ್ಯರಾಜ್ಯದ ಗೂಂಡಾಗಳು ಎಷ್ಟು ಜನ? ಕೋವಿಡ್‌ ಸಂದರ್ಭದಲ್ಲಿ ಗಡಿಯಲ್ಲಿ ಸಂಚಾರ ಕಷ್ಟವಿರುವಾಗ ಗೂಂಡಾಗಳು ಗುಂಪು ಗುಂಪಾಗಿ ನಮ್ಮ ಚೆಕ್‌ ಪೋಸ್ಟ್‌ಗಳನ್ನು ದಾಟಿ ಬಂದದ್ದು ಹೇಗೆ? ಬಂದಿದ್ದೇ ಆದರೆ, ವೈಫಲ್ಯ ಯಾರದ್ದು? ಅಧಿಕಾರ ಪಡೆಯುವುದು ಎಲ್ಲ ರಾಜಕೀಯ ಪಕ್ಷಗಳ ಪರಮ ಗುರಿ ಹೌದು. ಆದರೆ, ಅದರಲ್ಲಿ ಸಾಮಾಜಿಕ ಜವಾಬ್ದಾರಿಗಳಿರಬೇಕು, ಉತ್ತರದಾಯಿತ್ವವಿರಬೇಕು, ಪ್ರಾಮಾಣಿಕತೆ ಇರಬೇಕು. ಸಾಮಾಜಿಕ ಸಾಮರಸ್ಯಕ್ಕೆ ಸಂಬಂಧಿಸಿದ ವಿಚಾರವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡೆದುಕೊಳ್ಳುತ್ತಿರುವ ರೀತಿಯಲ್ಲಿ ಇದ್ಯಾವುದೂ ಇಲ್ಲ. ಇನ್ನಾದರೂ ಸಣ್ಣತನದ ರಾಜಕೀಯ ಬಿಡಿ ಎಂದು ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ. : - - - – --