ಸಿಎಂ ಅವರೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಬೇಡವೇ..? ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನೆ… ಬೆಂಗಳೂರು,ಆ,22,2020(..): ನಂಜನಗೂಡು ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ ಆಡಳಿತ ಕಾಲದಲ್ಲಿ ಸಹಜ ಆತ್ಮಹತ್ಯೆಗಳನ್ನು ಹತ್ಯೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡಿದ್ದರು. ಆದರೆ ಈಗ ಕೊರೊನಾ ವಾರಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆಗೆ ಕಾರಣವಾದ ಅಧಿಕಾರಿಗಳ ಬಗ್ಗೆ ಸರ್ಕಾರ ಬಾಯಿ ಬಿಚ್ಚುತ್ತಿಲ್ಲ. ಸಿಎಂ ಅವರೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಬೇಡವೇ..? ಎಂದು ಪ್ರಶ್ನಿಸಿದ್ದಾರೆ. ಇನ್ನು ನಂಜನಗೂಡು ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆ ವಿಷಾದನೀಯ‌. ಈ ಬಗ್ಗೆ ಸರ್ಕಾರ ಕೂಡಲೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಪರಾಧಿಗಳನ್ನು ಪತ್ತೆಹಚ್ಚಿ ಜೈಲಿಗೆ ಹಾಕಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. : - –- – - – .