ಪ್ಲಾಸ್ಮಾ ದಾನ ಮಾಡಿ ಹೆಗ್ಗಳಿಕೆಗೆ ಪಾತ್ರರಾದ ಶಾಸಕ ರಂಗನಾಥ್… ಬೆಂಗಳೂರು, ಆ.19,2020(..) : ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್‌ ಪ್ಲಾಸ್ಮಾ ದಾನ ಮಾಡಿದ್ದಾರೆ. ಶಾಸಕ ರಂಗನಾಥ್ ಜತೆಗೆ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೊರೋನಾ ರೋಗಿಗಳಿಗೆ ದಾನ ಮಾಡಿದ್ದಾರೆ. ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. () ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕ ರಂಗನಾಥ್ ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ. ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ. : –- -