ಬೆಂಗಳೂರು ಗಲಭೆ ಪ್ರಕರಣ: 14 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಬೆಂಗಳೂರು, ಆಗಸ್ಟ್, 19, 2020(..):ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಸ್ಥಳಾಂತರಿಸಲಾಯಿತು. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನಂತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಹಿನ್ನೆಲೆ ವಿಧಿಸಲಾಗಿದ್ದು, ಆರೋಪಿಗಳನ್ನ ಸೂಕ್ತ ಭದ್ರತೆಯೊಂದಿಗೆ ಪೊಲೀಸರು ಬಿಎಂಟಿಸಿ ಬಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. : - -14 - – - .