ಡಿ.ಜೆ ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಬಂಧನ… ಬೆಂಗಳೂರು,ಆ,18,2020(..): ಬೆಂಗಳೂರಿನ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಎಂಬುವವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಲಭೆ ಪ್ರಕರಣದ ಆರೋಪಿಗಳ ಜತೆ ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು ಈ ಹಿನ್ನೆಲೆ ಸಿಸಿಬಿ ಪೊಲೀಸರು ಅರುಣ್ ನನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದ ಹಿನ್ನೆಲೆ ಇಂದು ಇಬ್ಬರು ಕಾರ್ಪೋರೇಟರ್ ಗಳಾದ ಸಂಪತ್ ರಾಜ್ ಮತ್ತು ಜಾಕೀರ್ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಕಚೇರಿಯಲ್ಲಿ ಇಬ್ಬರು ಕಾರ್ಪೋರೇಟರ್ ಗಳನ್ನ ಪ್ರತ್ಯೇಕವಾಗಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಅರುಣ್ ಸಂಪತ್ ರಾಜ್ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ. : - - - – - -