ಕೃಷ್ಣನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆ …. ರಾಯಚೂರು, ಆಗಸ್ಟ್, 18, 2020(..):ಕೃಷ್ಣಾನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ಬಾಲಕಿ ಸೇರಿದಂತೆ ನಾಲ್ವರು ನಾಪತ್ತೆಯಾಗಿದ್ದಾರೆ. ಪೆದ್ದಕುರಂ(ಕುರ್ವಕುಲ) ಗ್ರಾಮ ಸಮೀಪದಲ್ಲಿ ಈ ಘಟನೆ ನಡೆದಿದ್ದು, ತೆಲಂಗಾಣ ರಾಜ್ಯದ ಮಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಈ ಘಟನೆ ಜರುಗಿದೆ. ಇದರಲ್ಲಿ 9 ಮಂದಿಯನ್ನು ರಕ್ಷಿಸಲಾಗಿದೆ. ಇವರೆಲ್ಲರೂ ರಾಯಚೂರು ತಾಲೂಕಿನ ಗಡಿಪ್ರದೇಶದ ಪೆದ್ದಕುರಂ ಗ್ರಾಮದವರಾಗಿದ್ದಾರೆ. ಬಾಲಕಿ ಮತ್ತು ಮೂವರು ಮಹಿಳೆಯರು ಕಾಣೆಯಾಗಿದ್ದು, ಅವರಿಗಾಗಿ ಶೋಧ ಮುಂದುವರೆದಿದೆ. ಎನ್ ಡಿ ಆರ್ ಎಫ್ ತಂಡ ಮತ್ತು ಯಾಪಲ ದಿನ್ನಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಹಶೀಲ್ದಾರ ಡಾ.ಹಂಪಣ್ಣ ಸಜ್ಜನ ತಿಳಿಸಿದರು. : - -