ಮತ್ತೆ ನಗುವಿನ ಕಚಗುಳಿ ಇಡಲು ಕೋಮಲ್ ರೆಡಿ ! ಬೆಂಗಳೂರು, ಆಗಸ್ಟ್ 17, 2020 (..):ನಟ ಕೋಮಲ್ ಮತ್ತೆ ನಗುವಿನ ಕಚಗುಳಿ ಇಡಲು ಬರುತ್ತಿದ್ದಾರೆ. ಹೌದು. ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಟಿಆರ್ ಚಂದ್ರಶೇಖರ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಕೋಮಲ್ ನಟಿಸುತ್ತಿದ್ದಾರೆ. ಗಣೇಶ ಚತುರ್ಥಿಯ ದಿನದಂದು ಮುಹೂರ್ತ ನೆರವೇರಲಿದೆ. ಕೆಜಿಎಫ್ ಚಿತ್ರದಲ್ಲಿ ಖಡಗ್ ಡೈಲಾಗ್ ಸೇರಿದಂತೆ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಕೆಎಲ್ ರಾಜಶೇಖರ್ ಅವರು ಕೋಮಲ್ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶೂಟಿಂಗ್ ನಡೆಯಲಿದೆ. ಸೆಪ್ಟೆಂಬರ್ ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.