ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು… ಮೈಸೂರು,ಆ,17,2020(..): ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮಲ್ಲೂಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್(30) ಮೃತ ಕಾರ್ಮಿಕ. ಅಮೃತ್ ಕುಮಾರ್ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಅಮೃತ್ ಕುಮಾರ್ ಯಂತ್ರಕ್ಕೆ ಸಿಲುಕಿ ಇಡೀ ದೇಹವೇ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್, ಬಿಳಿಗೆರೆ ಪಿಎಸ್ ಐ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. : - - - -