ಮೈಸೂರಿನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಯುವಕ‌ ಮೃತ ಮೈಸೂರು, ಆಗಸ್ಟ್ 16, 2020 (..):ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಯುವಕ‌ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್(21) ಮೃತ ದುರ್ದೈವಿ. ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವಕ. ನಿನ್ನೆ ಮಧ್ಯ ರಾತ್ರಿಯಿಂದ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗಳಿಗೆ ಅಲೆದಾಡಿದ ಪೋಷಕರು. ಕೊರೊನಾ ಕಾರಣ ನೀಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ. ಜಯದೇವ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಸಾವನ್ನಪ್ಪಿದ ಶರತ್. ಹೃದಯ ಸಂಭಂಧ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದ್ದರೆ ಬದುಕುತ್ತಿದ್ದನೆಂದು ಆರೋಪಿಸುವ ಪೋಷಕರು. ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವಿಳಂಬ ಮಾಡಿದ ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ. ವೈದ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.