ಜಯಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಾಳೆ ಉಚಿತ ಕೋವಿಡ್-19 ಪರೀಕ್ಷೆ… ಮೈಸೂರು,ಆ,15,2020(..): ನಾಳೆ ಜಯಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್-19 ಆಂಟಿಜೆನ್ ರಾಪಿಡ್ ಪರೀಕ್ಷೆಯನ್ನು ಆಯೋಜಿಸಲಾಗಿದೆ. 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಜಯಪುರದ ನಾಡ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಮಾತನಾಡಿದ ಉಪ ತಹಶೀಲ್ದಾರ್ ಕುಬೇರ ಕೆ ಎಸ್ ಅವರು, ನಾಳೆ ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ಕೋವಿಡ್-19 ರ ಆಂಟಿಜೆನ್ ರಾಪಿಡ್ ಟೆಸ್ಟ್ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದ್ದು ಜಯಪುರ ಹೋಬಳಿಯ ಸಾರ್ವಜನಿಕರು ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿ ವರ್ಗ ಹಾಗೂ ಇತರರು ಹಾಜರಿದ್ದರು. : - -19- - - -- .