ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಎಂಜಿಎಂ ಆಸ್ಪತ್ರೆ ಚೆನ್ನೈ,ಆ,15,2020(..): ಖ್ಯಾತ ಗಾಯಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯೆ ಪಿಆರ್ ಒ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲೈಫ್ ಸಪೋರ್ಟರ್ ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು ಇಸಿಎಂಒ ಮಿಷನ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ 24 ಗಂಟೆಗಳ ಕಾಲ ಏನು ಹೇಳಲು ಆಗಲ್ಲ ಎಂದು ತಿಳಿಸಿದ್ದಾರೆ. ಹಾಗೆಯೇ ಎಸ್ ಪಿಬಿ ಅವರು ಹೃದಯ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದಾರೆ. ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಕಾಣಲು ಇನ್ನು 2 ದಿನಗಳ ಸಮಯವಾದ್ರು ಬೇಕಾಗುವುದು ಎಂದು ಆಸ್ಪತ್ರೆಯ ಪಿಆರ್ ಒ ತಿಳಿಸಿದ್ದಾರೆ. ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. : - – - – - .