ಸಿಎಂ ಜತೆ ಚರ್ಚೆ ಬಳಿಕ ಕೆಲ ಮಹತ್ವದ ನಿರ್ಧಾರ – ಗೃಹ ಸಚಿವ ಬಸವರಾಜ ಬೊಮ್ಮಾಯಿ… ಬೆಂಗಳೂರು,ಆ,14,2020(..): ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದು ನಂತರ ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇನೆ. ಸಭೆಯ ನಂತರ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಚರ್ಚಿಸುತ್ತೇನೆ. ಈ ವೇಳೆ ಗಲಭೆ ಕುರಿತು ಮಾಹಿತಿ ನೀಡಲಾಗುವುದು. ಸಿಎಂ ಜತೆ ಸಭೆ ಬಳಿಕ ಕೆಲ ಮಹತ್ವದ ನಿರ್ಧಾರಗಳನ್ನ ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಇನ್ನು ಡಿ.ಜೆ ಹಳ್ಳಿ, ಕೆಜಿಹಳ್ಳಿ ಕಾವಲ್ ಭೈರಸಂದ್ರದಲ್ಲಿ ಪೊಲೀಸರಿಂದ ಭದ್ರತೆ ವಹಿಸಲಾಗಿದ್ದು ಕರ್ಫ್ಯೂ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. ಸೂಕ್ಷ್ಮ ಪ್ರದೇಶ, ರಸ್ತೆಗಳಲ್ಲಿ ಪೊಲೀಸರನ್ನ ನಿಯೋಜಿಸಲಾಗಿದ್ದು ಜನರು ಅನಾವಶ್ಯಕವಾಗಿ ಓಡಾಡದಂತೆ ಸೂಚಿಸಲಾಗಿದೆ. : – - - - - .