ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್… ಬೆಂಗಳೂರು,ಆ,14,2020(..): ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಮಂದಿ ಆರೋಪಿಗಳನ್ನ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಇದೀಗ ಬಂಧಿತರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಸಿಸಿಬಿ ಮತ್ತು ಕೆಎಸ್ ಆರ್ ಪಿ ಭದ್ರತೆಯಲ್ಲಿ ರಾತ್ರೋರಾತ್ರಿ ಕೆಎಸ್ ಆರ್ ಟಿಸಿ ಬಸ್ ಮೂಲಕ ಆರೋಪಿಗಳನ್ನ ಶಿಫ್ಟ್ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕಿಡಿಗೇಡಿ ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು. : - -- – .