ಕೊರೊನಾ ಸೋಂಕಿನ ವಿರುದ್ಧ ಗೆದ್ದ ರಾಜಮೌಳಿ ಹಾಗೂ ಕುಟುಂಬ ಬೆಂಗಳೂರು, ಆಗಸ್ಟ್ 12, 2020 (..):ನಿರ್ದೇಶಕ ರಾಜಮೌಳಿ ಮತ್ತು ಅವರ ಕುಟುಂಬ ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಕುರಿತು ರಾಜಮೌಳಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ. ವರದಿ ಕೂಡ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಜುಲೈ 29ರಂದು ರಾಜಮೌಳಿ ಮತ್ತು ಅವರ ಕುಟುಂಬದವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದಕಾರಣ ಎಲ್ಲರನ್ನೂ ಮನೆಯಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು.