ಗಲಭೆ ಪ್ರಕರಣ: ಎಸ್ ಡಿಪಿಐಗೆ ಸೇರಿದ ನಾಲ್ವರ ಬಂಧನ: ಆಸ್ತಿಪಾಸ್ತಿ ನಷ್ಟ ವಸೂಲಿಗೆ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ… ಬೆಂಗಳೂರು,ಆ,13,2020(..): ಬೆಂಗಳೂರಿನ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐಗೆ ಸೇರಿದ ನಾಲ್ವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗಲಭೆ ಕುರಿತು ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಪ್ರಕರಣದ ಹಿಂದೆ ಎಸ್ ಡಿಪಿಐ ಕೈವಾಡದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಸ್ ಡಿಪಿಐಗೆ ಸೇರಿದ ನಾಲ್ವರನ್ನ ಬಂಧಿಸಲಾಗಿದೆ ಗಲಭೆ ಹಿಂದೆ ರಾಜಕೀಯ ಕೈವಾಡ ಇದೆ. ಎಸ್ ಡಿಪಿಐ ಹಿಂದಿನ ಕೇಸ್ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. ಹಾಗೆಯೇ ಗಲಭೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸುಪ್ರೀಂಕೋರ್ಟ್ ತೀರ್ಮಾನದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಹಾಗೆಯೇ ಜಮೀರ್ ಅಹ್ಮದ್ ಖಾನ್ ಯಾರ ಪರ ಅನ್ನೋದು ಸ್ಪಷ್ಟವಾಗಿದೆ. ಅದು ಅವರ ಹೇಳಿಕೆಯಿಂದಲೇ ಗೊತ್ತಾಗುತ್ತದೆ. ಅವರ ಹೇಳಿಕೆಗೆ ಅವರೇ ಜವಾಬ್ದಾರಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು. : - – - - - .