ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್.. ಬೆಂಗಳೂರು,ಆ,13,2020(..): ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದರಾಮಯ್ಯ ಅವರಿಗೆ ಬುಧವಾರ ನಡೆದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದ್ದು ಈ ಹಿನ್ನೆಲೆ ಇಂದು ಸಿದ್ಧರಾಮಯ್ಯ ಡಿಸ್ಜಾರ್ಜ್ ಆಗಲಿದ್ದಾರೆ. ಇದೇ ವೇಳೆ ನಿನ್ನೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಸಿದ್ದರಾಮಯ್ಯ, ನಾಡಿನ ಸೇವೆ ಮಾಡುವ ಮೂಲಕ ನಿಮ್ಮ ಋಣ ತೀರಿಸುವೆ ಎಂದಿದ್ದರು. : - ---