ಬಿ.ಸತ್ಯನಾರಾಯಣ ಅವರ ನಿವಾಸಕ್ಕೆ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ್… ತುಮಕೂರು,ಆ,12,2020(..): ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಹಾಗೂ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು , ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಮತ್ತು ಪುತ್ರ ಸತ್ಯಪ್ರಕಾಶ್ ಅವರಿಗೆ ಸಾಂತ್ವನ ಹೇಳಿದರಲ್ಲದೆ, ಸತ್ಯನಾರಾಯಣ ಅವರ ಜತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡರು. ಬಳಿಕ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಸತ್ಯನಾರಾಯಣ ಅವರು ಅತ್ಯಂತ ಸಜ್ಜನ ರಾಜಕಾರಣಿಯಾಗಿದ್ದರು. ಸರಳಜೀವಿ, ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಅವರೊಬ್ಬ ವಿರಳ ರಾಜಕಾರಣಿ ಎಂದು ನುಡಿದರು. ಈ ಸಂದರ್ಭದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಶಾಸಕರಾದ ಜ್ಯೋತಿ ಗಣೇಶ್ ಅವರು ಡಿಸಿಎಂ ಜತೆಯಲ್ಲಿದ್ದರು. : . – - - – -