ಡಿಜೆ.ಹಳ್ಳಿ ,ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಗಲಾಟೆ ವೇಳೆ ಮಾಧ್ಯಮದವರ ಮೇಲೂ ಹಲ್ಲೆ: ಘಟನೆ ಖಂಡಿಸಿ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ… ಮೈಸೂರು,ಆ,11,2020(..): ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಗಲಾಟೆ ವೇಳೆ ಕರ್ತವ್ಯ ನಿರತ ಪತ್ರಕರ್ತರು ಹಾಗೂ ಕ್ಯಾಮರಮನ್ ಗಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಲ್ಲದೆ, ಕ್ಯಾಮರಾ ಮತ್ತು ವಾಹನವನ್ನೂ ಜಖಂಗೊಳಿಸಿರುವ ಘಟನೆಯನ್ನ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ. ಮಂಗಳವಾರ ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಗುಂಪೊಂದು ಸಾರ್ವಜನಿಕವಾಗಿ ದಾಂಧಲೆಗಿಳಿದಿದ್ದ ವೇಳೆ ವರದಿಗೆಂದು ತೆರಳಿದ್ದ ಮಾಧ್ಯಮದವರ ಮೇಲೆ ಮನಸ್ಸೊಯಿಚ್ಚೆ ಕಲ್ಲು ತೂರಾಟ ನಡೆಸಿ, ಹಲ್ಲೆ ಮಾಡಲಾಗಿದೆ. ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಸರ್ಕಾರ ಅವಕಾಶ ಕಲ್ಪಿಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಗ್ರಹಿಸಿದೆ. : -’ - - – -- -