ಲೋಕಸಭೆ ಚುನಾವಣೆ ನಂತರವೂ ಮೈತ್ರಿ ಮುಂದುವರಿಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು. ತುಮಕೂರು, ಮಾರ್ಚ್, 30,2024 (..):ಲೋಕಸಭೆ ಚುನಾವಣೆನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಚುನಾವಣೆ ಮುಗಿದ ನಂತರವೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯಲಿದ್ದು, ಈ ಸಂಬಂಧ ಕಾಪಾಡುಕೊಂಡು‌ ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು. ದೇಶದಲ್ಲಿ ಕಾಂಗ್ರೆಸ್ ಹಿನಾಯ ಸ್ಥಿತಿಗೆ ತಲುಪಿದೆ ಎಲ್ಲಿದೆ ಕಾಂಗ್ರೆಸ್..? ಇಡೀ ಹಿಂದೂಸ್ತಾನದಲ್ಲಿ 3 ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದೆ . ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಇದೆ ಎಂದರು. : , , .