ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ಮಾಡುವಂತಿಲ್ಲ- ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.. ಬೆಂಗಳೂರು,ಆ,11,2020(..): ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು. ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. : - - –- - - -.