ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ, ಈ ಬಾರಿ 71.80 ರಷ್ಟು ಫಲಿತಾಂಶ… ಬೆಂಗಳೂರು,ಆ,10,2020(..): ಕೊರೋನಾ ಮಹಾಮಾರಿ ನಡುವೆ ರಾಜ್ಯದಲ್ಲಿ ನಡೆದಿದ್ದ 2019-20ನೇ ಸಾಲಿನ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದರು. ಈ ಬಾರಿ 71.80 ರಷ್ಟು ಫಲಿತಾಂಶ ಬಂದಿದ್ದು ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಸಕ್ತ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 2,879 ಪರೀಕ್ಷಾ ಕೇಂದ್ರಗಳ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 330 ಹೆಚ್ಚುವರಿ ಕೇಂದ್ರಗಳನ್ನು ರಚಿಸಲಾಗಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು . 2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದರೇ ಯಾದಗಿರಿ ಕೊನೆಯ ಸ್ಥಾನ ಗಳಿಸಿದೆ. ://... ನಲ್ಲಿ ಫಲಿತಾಂಶ ಲಭ್ಯವಾಗಲಿದೆ. : –- - 71.80 .