ಕೊರೋನಾ ನೆಗೆಟಿವ್ ಬಂದ ಹಿನ್ನೆಲೆ: ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್…. ಬೆಂಗಳೂರು,ಆ,10,2020(..): ಮಹಾಮಾರಿ ಕೊರೋನಾಗೆ ತುತ್ತಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದ ಹಿನ್ನೆಲೆ ಯಡಿಯೂರಪ್ಪ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊರೋನಾ ಸೋಂಕಿನಿಂದಾಗಿ ಸತತ 9 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಿಎಂ ಬಿಎಸ ಯಡಿಯೂರಪ್ಪ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಸಿಎಂ ನಿವಾಸ ಕಾವೇರಿಯಲ್ಲಿ ವಿಶ್ವಾಂತಿ ಪಡೆಯುತ್ತಿದ್ದಾರೆ. ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. : - - – ..