ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಪತ್ನಿ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ…. ಮೈಸೂರು,ಆ,10,2020(..): ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಹೆಚ್.ಡಿ ಕೋಟೆ ತಾಲ್ಲೂಕು ವಿಶ್ವನಾಥಯ್ಯ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಗೋವಿಂದನಾಯ್ಕ (30) ಮೃತ ವ್ಯಕ್ತಿ. ಕಳೆದ ರಾತ್ರಿ ಈ ಘಟನೆ ಸಂಭವಿಸಿದ್ದು ಈ ಸಾವಿನ ಪ್ರಕರಣ ಸಾಕಷ್ಟು ಅನುಮಾನ ಹುಟ್ಟಿಸಿದೆ. ಕೌಟುಂಬಿಕ ಕಲಹದಿಂದ ಪತಿ ಮತ್ತು ಪತ್ನಿ ಇಬ್ಬರು ಬೇರೆಯಾಗಿದ್ದರು. ಈ ನಡುವೆ ಕಳೆದ ತಡರಾತ್ರಿ ನೇಣುಬಿಗಿದ ಸ್ಥಿತಿಯಲ್ಲಿ ಗೋವಿಂದ ನಾಯ್ಕನ ಶವ ಪತ್ತೆಯಾಗಿದ್ದು ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – - – –