ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್…. ಬೆಂಗಳೂರು,ಆ,10,2020(..): ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕೊರೋನಾದಿಂದ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕರೋನಾ ಸೊಂಕಿಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಇಂದು ಕೊರೋನಾ ನೆಗೆಟಿವ್ ಬಂದಿದ್ದು ಸಂಪೂರ್ಣ ಗುಣಮುಖರಾಗಿದ್ದಾರೆ. ಅವರು ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಜಾರ್ಜ್‌ ಆಗಲಿದ್ದಾರೆ ಎನ್ನಲಾಗಿದೆ. ಸಿಎಂ ಬಿಎಸ್‌ ವೈ ಗೆ ಕಳೆದ 10 ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ನಂತರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ 10 ದಿನಕ್ಕೆ ಕೊರೊನಾ ಸೋಂಕಿನಿಂದ ಅವರು ಗುಣಮುಖರಾಗಿದ್ದಾರೆ. :- - – - -.