ಕೊಡಗಿನಲ್ಲಿ ಕಡಿಮೆಯಾದ ಮಳೆ ಆರ್ಭಟ… ಕೊಡಗು,ಆ,8,2020(..): ಕಳೆದ ನಾಲ್ಕೈದು ದಿನಗಳಿಂದ ಕಾಫಿನಾಡು ಕೊಡಗಿನಲ್ಲಿ ಆರ್ಭಟಿಸುತ್ತಿದ್ದ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆ ಮಡಿಕೇರಿ, ಭಾಗಮಂಡಲದ ರಸ್ತಗಳಲ್ಲಿ ವಾಹನಗಳು ಸಂಚರಿಸುತ್ತಿವೆ. ಭಾರಿಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳು ಸಂಚರಿಸುತ್ತಿವೆ. ಭಾರಿ ಮಳೆಯಿಂದಾಗಿ ಕೊಡಗು, ಮೈಸೂರು, ಉಡುಪಿ, ದಕ್ಷಿಣಕನ್ನಡ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. : - - .