ಕಾಂಗ್ರೆಸ್ ನಲ್ಲಿ ಗುಂಪು ರಾಜಕಾರಣ ಇಲ್ಲ: ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡ್ತಾರೆ- ಡಿ.ಕೆ ಶಿವಕುಮಾರ್. ಬೆಂಗಳೂರು, ಮಾರ್ಚ್,30, 2024 (..):ಕೋಲಾರ ಕ್ಷೇತ್ರದ ಟಿಕೆಟ್ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ನಲ್ಲಿ ಯಾವುದೇ ಗುಂಪು ರಾಜಕಾರಣ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡ್ತಾರೆ ಎಂದು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಯಾರೇ ಆದರೂ ಲಕ್ಷ್ಮಣ ರೇಖೆ ದಾಟುವ ಹಾಗಿಲ್ಲ. ಸೀಟು ಗೆಲ್ಲೋದು ಬಿಡೋದು ನಂತರ, ಶಿಸ್ತು ಮುಖ್ಯ. ಅಂತಿಮವಾಗಿ ಯಾರೇ ಶಿಸ್ತು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಶಿಸ್ತು ಉಲ್ಲಂಘಿಸಿದವರು ಕ್ಷಮೆ ಕೇಳಿದ್ದಾರೆ ಎಂದರು. ಮುನಿಯಪ್ಪ ರಮೇಶ್ ಜೊತೆ ಮಾತನಾಡಿದ್ದೇನೆ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುಂಪು ರಾಜಕಾರಣ ಇಲ್ಲ. ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : , ,