ಶಾಸಕ ಜಿ.ಟಿ ದೇವೇಗೌಡರಿಗೆ ವಕ್ಕರಿಸಿದ ಕೊರೋನಾ… ಮೈಸೂರು,ಆ,5,2020(..): ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಕೊರೋನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೆ ಇದೀಗ ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ ದೇವೇಗೌಢರಿಗೂ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ಕುರಿತು ಸ್ವತಃ ಟ್ವಿಟ್ಟರ್ ನಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಮಾಹಿತಿ ನೀಡಿದ್ದಾರೆ. ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಹಾಗೆಯೇ ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ಶಾಸಕ ಜಿ.ಟಿ ದೇವೇಗೌಡರು ಸಲಹೆ ನೀಡಿದ್ದಾರೆ. : - – - -