ನಾಳೆ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ: ಮೈಸೂರು ನಗರದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ… ಮೈಸೂರು,ಆ,4,2020(..): ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ. ಮೈಸೂರು ನಗರದಲ್ಲಿ ನಾಳೆ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ ಅವರು ಆದೇಶ ಹೊರಡಿಸಿದ್ದಾರೆ. ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಈ ವೇಳೆ ಮೈಸೂರಿನಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಜತೆಗೆ ಸಂಭ್ರಮಾಚರಣೆ, ಎಲ್ ಇಡಿ ಬಳಕೆ ಮಾಡಿ ಕಾರ್ಯಕ್ರಮ ವೀಕ್ಷಣೆ ಮಾಡಲು ಅವಕಾಶವಿಲ್ಲ. ಯಾವುದೇ ಸಭೆ ಸಮಾರಂಭ, ಪ್ರತಿಭಟನೆ, ಬೈಕ್ ರ್ಯಾಲಿ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 4 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್ 5 ರ ಮಧ್ಯರಾತ್ರಿ 12ವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಹೆಚ್ಚು ಜನ ಗುಂಪುಗೂಡದಂತೆ ಈ ಕ್ರಮ ಕೈಗೊಳ್ಳಲಾಗಿದೆ. : – - - –