ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್… ಮೈಸೂರು,ಆ,4,2020(..): ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್ ಮಾಡಲಾಗಿದೆ. ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಸಂಘದ ಕಟ್ಟಡಕ್ಕೆ ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಜುಲೈ 30 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಂವಾದ ನಡೆಸಿದ್ದರು. ಹೀಗಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೂ ಆತಂಕ ಶುರುವಾಗಿದ್ದು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. : - -- –- - -